ಕರ್ನಾಟಕ ಪ್ರವಾಸೋದ್ಯಮಕ್ಕೆ ಸುಸ್ವಾಗತ

ಪ್ರವಾಸೋದ್ಯಮ ಇಲಾಖೆ

yeddyurappa

ಶ್ರೀ ಬಿ.ಎಸ್.ಯಡಿಯೂರಪ್ಪ

ಗೌರವಾನ್ವಿತ ಮುಖ್ಯಮಂತ್ರಿಗಳು

ಶ್ರೀ ಸಿ.ಪಿ.ಯೋಗೇಶ್ವರ

ಸನ್ಮಾನ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಕರ್ನಾಟಕ ಸರ್ಕಾರ

ಪ್ರವಾಸೋದ್ಯಮ ಇಲಾಖೆಯು 1974 ರಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ಪ್ರತ್ಯೇಕಗೊಂಡು ಸ್ವತಂತ್ರ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು ಉತ್ತೇಜಿಸುವ ಜವಾಬ್ದಾರಿಯನ್ನು ಹೊಂದಿದೆ. ಹೊಸ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ಉತ್ತೇಜಿಸುವ ಮೂಲಕ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸೋದ್ಯಮ ವ್ಯಾಪಾರ ಮೇಳಗಳು, ಹೂಡಿಕೆದಾರರ ಸಭೆ, ರಸ್ತೆ ಪ್ರದರ್ಶನಗಳು(ರೋಡ್ ಷೋ), ಥೀಮ್ ಅಭಿಯಾನಗಳಲ್ಲಿ ಭಾಗವಹಿಸುವ ಮೂಲಕ ಕರ್ನಾಟಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಇಲಾಖೆ ನಿರಂತರವಾಗಿ ಪ್ರಯತ್ನಿಸುತ್ತಿದೆ. ಪ್ರವಾಸೋದ್ಯಮ ನೀತಿಯ ಕರಡು ತಯಾರಿಸಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಇಲಾಖೆಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮದ ಬೆಳವಣಿಗೆ ಮತ್ತು ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಪ್ರವಾಸೋದ್ಯಮ ನೀತಿಗಳನ್ನು ಸಕ್ರಿಯಗೊಳಿಸಿದ್ದು, ಇಲಾಖೆ ತನ್ನ ನಿರಂತರ ಪ್ರಚಾರ ಅಭಿಯಾನದ ಮೂಲಕ ಕರ್ನಾಟಕ ಪ್ರವಾಸೋದ್ಯಮವನ್ನು ರಾಷ್ಟ್ರೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತೇಜಿಸುತ್ತದೆ.

ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ 4 ಸರ್ಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ, ಅವುಗಳೆಂದರೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ), ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ (ಜೆಎಲ್‌ಆರ್), ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ಲಿಮಿಟೆಡ್ (ಕೆಟಿಐಎಲ್) ಮತ್ತು ಕರ್ನಾಟಕ ಪ್ರದರ್ಶನ ಪ್ರಾಧಿಕಾರ (ಕೆಇಎ), ಮೈಸೂರು.