Karnataka logo

Karnataka Tourism
GO UP
Gandhi jayanthi 2021

ಗಾಂಧಿ ಜಯಂತಿ

separator
  /  ಗಾಂಧಿ ಜಯಂತಿ

ಕರ್ನಾಟಕದಲ್ಲಿ ಗಾಂಧಿ ಜಯಂತಿಯ ಆಚರಣೆ

Gandhi Jayanti

ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದರು, ಇತರ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಹುರಿದುಂಬಿಸುತ್ತಾ ಅವರು ಹಲವಾರು ನಾಗರಿಕ ಹಕ್ಕು ಚಳುವಳಿಗಳನ್ನು ಆರಂಭಿಸಿದರು. ಅಹಿಂಸೆಯೇ ಅವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ರಾಷ್ಟ್ರೀಯ ರಜಾದಿನವೆಂದು ಗುರುತಿಸಲಾಗಿದೆ. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸಿ ಮಹಾತ್ಮ ಗಾಂಧಿಗೆ ತಮ್ಮ ಗೌರವ ನಮನಗಳನ್ನು ಸಲ್ಲಿಸುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಗೌರವಿಸಲು ಈ ದಿನದಂದು ಗಾಂಧೀಜಿಯವರ ಚಿಂತನೆಗಳನ್ನು ಮತ್ತು ತತ್ವಶಾಸ್ತ್ರಗಳನ್ನು ಪ್ರಚಾರ ಮಾಡುವ ಅನೇಕ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಲಾಗುತ್ತದೆ. ಗಾಂಧೀಜಿಯವರ ಜೀವನ ಮತ್ತು ಆದರ್ಶಗಳು ಜನರ ಜೀವನದ ಮೇಲೆ ಪ್ರಭಾವ ಬೀರುತ್ತಲೇ ಇರುತ್ತದೆ.

ಭಾರತದ ಪ್ರತಿ ರಾಜ್ಯದಲ್ಲೂ ಗಾಂಧಿ ಜಯಂತಿ ಆಚರಣೆಯು ವಿಶಿಷ್ಟವಾಗಿದ್ದರೂ ಸಹ ಕರ್ನಾಟಕ ಸರ್ಕಾರವು ಬಡತನ ನಿರ್ಮೂಲನೆ, ಪರಿಸರ ಸಂರಕ್ಷಣೆ, ರೈತರ ಕಲ್ಯಾಣ ಮತ್ತು ಗುಡಿ ಕೈಗಾರಿಕೆಗಳ ಸುಧಾರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಈ ಮೂಲಕ ಗಾಂಧಿಯವರ ಆಲೋಚನೆ ವಿಚಾರಗಳನ್ನು ಜನರಿಗೆ ತಿಳಿಸುತ್ತದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಹಾತ್ಮ ಗಾಂಧಿಯವರು ಐದು ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದು ಸ್ಮರಣೀಯ ವಿಷಯವಾಗಿದೆ. ಬೆಂಗಳೂರು ಅಲ್ಲದೇ ಕರ್ನಾಟಕದ ಅನೇಕ ಪ್ರದೇಶಗಳಿಗೆ ಗಾಂಧಿಜಿಯವರು ಭೇಟಿ ನೀಡಿದ್ದರು. ಬೆಂಗಳೂರಿನ ಕುಮಾರ ಪಾರ್ಕ್ ಈಸ್ಟ್ ಒಂದು ಅತಿಥಿ ಗೃಹವಾಗಿದ್ದು, ಅಲ್ಲಿ ಅವರು 1927 ರಲ್ಲಿ ಸುಮಾರು ಮೂರು ತಿಂಗಳುಗಳ ಕಾಲ ತಂಗಿದ್ದರು. ಈಗ, ಈ ಸ್ಥಳವನ್ನು ಸಂರಕ್ಷಿಸಲಾಗಿದೆ ಅಲ್ಲದೆ, ಬೆಂಗಳೂರಿನಲ್ಲಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಅಪರೂಪದ ಛಾಯಾಚಿತ್ರಗಳು, ಗ್ರಂಥಾಲಯ ಮತ್ತು ಅವರು ಬರೆದ ಕೆಲವು ಪತ್ರಗಳನ್ನು ಹೊಂದಿರುವ ಮ್ಯೂಸಿಯಂ ಇದೆ.

Gandhi Jayanthi
Gandhi Jayanti

ಬೆಂಗಳೂರಿನ ಹೊರತಾಗಿ, ಬೆಳಗಾವಿಯಲ್ಲಿಯೂ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಏಕೆಂದರೆ ಗಾಂಧಿಯವರು ಇಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿದ್ದರು. ಇಲ್ಲಿ ಅವರ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಹೈಲೈಟ್ ಮಾಡಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿರುವ ಬೆಳಗಾವಿ ಜಿಲ್ಲೆಯ ಹುಡ್ಲಿ ಗ್ರಾಮವು ಗಾಂಧಿಯವರ ತತ್ವಗಳ ಮೇಲೆ ಕಾರ್ಯ ನಿರ್ವಹಿಸುತ್ತದೆ. ಅಲ್ಲದೆ, ಗಾಂಧಿಯವರು 1936 ರಲ್ಲಿ ನಂದಿ ಬೆಟ್ಟದಲ್ಲಿ 45 ದಿನಗಳ ಕಾಲ ತಂಗಿದ್ದರು ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇಡೀ ವಿಶ್ವವೇ ಗಾಂಧಿಯವರ ತತ್ವ ಮತ್ತು ಆದರ್ಶಗಳ ಪ್ರಭಾವಕ್ಕೆ ಒಳಗಾಗಿದೆ. ಕರ್ನಾಟಕ ರಾಜ್ಯವು ಸಹ ಗಾಂಧಿ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತದೆ. ಆದಾಗ್ಯೂ ಈ ಸಲ ಕೊರೊನಾ ಕಾರಣದಿಂದಾಗಿ ಗಾಂಧಿ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ. ಆದರೆ ನೀವು ವಿವಿಧ ರಾಜ್ಯಗಳ ವರ್ಚುವಲ್ ಆಚರಣೆಗಳಲ್ಲಿ ಭಾಗವಹಿಸಬಹುದು. ಇವು ಅವರ ಜೀವನ, ವೃತ್ತಿ ಮತ್ತು ನಿಮ್ಮ ಜೀವನದಲ್ಲಿ ನೀವು ಅಳವಡಿಸಿಕೊಳ್ಳಬೇಕಾದ ಸಿದ್ಧಾಂತಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮಗೆ ಸಹಾಯ ಮಾಡುತ್ತವೆ.

ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಭಾರತದ ಸ್ವಾತಂತ್ರ್ಯ ಚಳುವಳಿಯನ್ನು ಮುನ್ನಡೆಸಿದರು, ಇತರ ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಹುರಿದುಂಬಿಸುತ್ತಾ ಅವರು ಹಲವಾರು ನಾಗರಿಕ ಹಕ್ಕು ಚಳುವಳಿಗಳನ್ನು ಆರಂಭಿಸಿದರು. ಅಹಿಂಸೆಯೇ ಅವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಅವರ ಜನ್ಮದಿನವಾದ ಅಕ್ಟೋಬರ್ 2 ಅನ್ನು ರಾಷ್ಟ್ರೀಯ ರಜಾದಿನವೆಂದು ಗುರುತಿಸಲಾಗಿದೆ. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸಿ ಮಹಾತ್ಮ ಗಾಂಧಿಗೆ ತಮ್ಮ ಗೌರವ ನಮನಗಳನ್ನು ಸಲ್ಲಿಸುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಅವರ ಅಮೂಲ್ಯ ಕೊಡುಗೆಗಳನ್ನು ಗೌರವಿಸಲು ಈ ದಿನದಂದು ಗಾಂಧೀಜಿಯವರ ಚಿಂತನೆಗಳನ್ನು ಮತ್ತು ತತ್ವಶಾಸ್ತ್ರಗಳನ್ನು ಪ್ರಚಾರ ಮಾಡುವ ಅನೇಕ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಲಾಗುತ್ತದೆ. ಗಾಂಧೀಜಿಯವರ ಜೀವನ ಮತ್ತು ಆದರ್ಶಗಳು ಜನರ ಜೀವನದ ಮೇಲೆ ಪ್ರಭಾವ ಬೀರುತ್ತಲೇ ಇರುತ್ತದೆ.

Gandhi Jayanti

ಭಾರತದ ಪ್ರತಿ ರಾಜ್ಯದಲ್ಲೂ ಗಾಂಧಿ ಜಯಂತಿ ಆಚರಣೆಯು ವಿಶಿಷ್ಟವಾಗಿದ್ದರೂ ಸಹ ಕರ್ನಾಟಕ ಸರ್ಕಾರವು ಬಡತನ ನಿರ್ಮೂಲನೆ, ಪರಿಸರ ಸಂರಕ್ಷಣೆ, ರೈತರ ಕಲ್ಯಾಣ ಮತ್ತು ಗುಡಿ ಕೈಗಾರಿಕೆಗಳ ಸುಧಾರಣೆಯಂತಹ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಈ ಮೂಲಕ ಗಾಂಧಿಯವರ ಆಲೋಚನೆ ವಿಚಾರಗಳನ್ನು ಜನರಿಗೆ ತಿಳಿಸುತ್ತದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಮಹಾತ್ಮ ಗಾಂಧಿಯವರು ಐದು ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದ್ದು ಸ್ಮರಣೀಯ ವಿಷಯವಾಗಿದೆ. ಬೆಂಗಳೂರು ಅಲ್ಲದೇ ಕರ್ನಾಟಕದ ಅನೇಕ ಪ್ರದೇಶಗಳಿಗೆ ಗಾಂಧಿಜಿಯವರು ಭೇಟಿ ನೀಡಿದ್ದರು. ಬೆಂಗಳೂರಿನ ಕುಮಾರ ಪಾರ್ಕ್ ಈಸ್ಟ್ ಒಂದು ಅತಿಥಿ ಗೃಹವಾಗಿದ್ದು, ಅಲ್ಲಿ ಅವರು 1927 ರಲ್ಲಿ ಸುಮಾರು ಮೂರು ತಿಂಗಳುಗಳ ಕಾಲ ತಂಗಿದ್ದರು. ಈಗ, ಈ ಸ್ಥಳವನ್ನು ಸಂರಕ್ಷಿಸಲಾಗಿದೆ ಅಲ್ಲದೆ, ಬೆಂಗಳೂರಿನಲ್ಲಿರುವ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧಿಯವರ ಅಪರೂಪದ ಛಾಯಾಚಿತ್ರಗಳು, ಗ್ರಂಥಾಲಯ ಮತ್ತು ಅವರು ಬರೆದ ಕೆಲವು ಪತ್ರಗಳನ್ನು ಹೊಂದಿರುವ
ಮ್ಯೂಸಿಯಂ ಇದೆ.

Gandhi Jayanthi

ಬೆಂಗಳೂರಿನ ಹೊರತಾಗಿ, ಬೆಳಗಾವಿಯಲ್ಲಿಯೂ ಗಾಂಧಿ ಜಯಂತಿಯನ್ನು ಸಂಭ್ರಮದಿಂದ ಆಚರಿಸುತ್ತಾರೆ. ಏಕೆಂದರೆ ಗಾಂಧಿಯವರು ಇಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿದ್ದರು. ಇಲ್ಲಿ ಅವರ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಹೈಲೈಟ್ ಮಾಡಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿರುವ ಬೆಳಗಾವಿ ಜಿಲ್ಲೆಯ ಹುಡ್ಲಿ ಗ್ರಾಮವು ಗಾಂಧಿಯವರ ತತ್ವಗಳ ಮೇಲೆ ಕಾರ್ಯ ನಿರ್ವಹಿಸುತ್ತದೆ. ಅಲ್ಲದೆ, ಗಾಂಧಿಯವರು 1936 ರಲ್ಲಿ ನಂದಿ ಬೆಟ್ಟದಲ್ಲಿ 45 ದಿನಗಳ ಕಾಲ ತಂಗಿದ್ದರು ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಇಡೀ ವಿಶ್ವವೇ ಗಾಂಧಿಯವರ ತತ್ವ ಮತ್ತು ಆದರ್ಶಗಳ ಪ್ರಭಾವಕ್ಕೆ ಒಳಗಾಗಿದೆ. ಕರ್ನಾಟಕ ರಾಜ್ಯವು ಸಹ ಗಾಂಧಿ ಜಯಂತಿಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತದೆ. ಆದಾಗ್ಯೂ ಈ ಸಲ ಕೊರೊನಾ ಕಾರಣದಿಂದಾಗಿ ಗಾಂಧಿ ಜಯಂತಿಯನ್ನು ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ. ಆದರೆ ನೀವು ವಿವಿಧ ರಾಜ್ಯಗಳ ವರ್ಚುವಲ್ ಆಚರಣೆಗಳಲ್ಲಿ
ಭಾಗವಹಿಸಬಹುದು. ಇವು ಅವರ ಜೀವನ, ವೃತ್ತಿ ಮತ್ತು ನಿಮ್ಮ ಜೀವನದಲ್ಲಿ ನೀವು ಅಳವಡಿಸಿಕೊಳ್ಳಬೇಕಾದ ಸಿದ್ಧಾಂತಗಳ
ಬಗ್ಗೆ ಹೆಚ್ಚು ತಿಳಿದುಕೊಳ್ಳಲು ನಿಮಗೆ ಸಹಾಯ ಮಾಡುತ್ತವೆ.

Gandhi Jayanti